Wednesday, April 30, 2025
HomeScholarshipSBI Asha Scholarship 2022 :

SBI Asha Scholarship 2022 :

SBI Asha Scholarship 2022 :

 ವಿದ್ಯಾರ್ಥಿಗಳಿಗೆ ‘ಎಸ್‌ಬಿಐ’ ನಿಂದ 15 ಸಾವಿರ ವಿದ್ಯಾರ್ಥಿ ವೇತನ 2022

ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ, ಎಸ್‌ಬಿಐ ಫೌಂಡೇಶನ್‌ನ ಆಶ್ರಯದಲ್ಲಿ ಆಶಾ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಈ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು,  Complete Details Given Below.
Highlights :
  • ‘ಎಸ್‌ಬಿಐ’ನಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ.
  • ಎಸ್‌ಬಿಐ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.
  • ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆ ದಿನ.
ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ (SBI) ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನ ನೀಡಿದೆ. ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾಗಿದ್ದು, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ಎಸ್‌ಬಿಐ ಫೌಂಡೇಶನ್‌ನ ಆಶ್ರಯದಲ್ಲಿ ಆಶಾ ವಿದ್ಯಾರ್ಥಿವೇತನ ನೀಡಲಾಗುತ್ತಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
  1. ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರಬೇಕು.
  2. ಕಳೆದ ಶೈಕ್ಷಣಿಕ ಪರೀಕ್ಷೆಗಳಲ್ಲಿ ಕನಿಷ್ಠ 75% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
  3. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 3 ಲಕ್ಷಕ್ಕಿಂತ ಕಡಿಮೆ ಇರಬೇಕು.
  4. ವಿದ್ಯಾರ್ಥಿಯು ಭಾರತದ ಪ್ರಜೆಯಾಗಿರಬೇಕು.

👇👇online Application Link Given Below 👇👇


ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು
  • ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ.
  • ಸರ್ಕಾರದಿಂದ ನೀಡಿದ ಯಾವುದಾದರು ಒಂದು ಗುರುತಿನ ಚೀಟಿ. ( ಆಧಾರ್, ವೋಟರ್ ಐಡಿ, ಡ್ರೈವಿಂಗ್ ಲೈಸನ್ಸ್, ಪಾನ್ ಕಾರ್ಡ್)
  • ಪ್ರಸಕ್ತ ವರ್ಷದ ಪ್ರವೇಶ ಪ್ರಮಾಣಪತ್ರ.
  • ವಿದ್ಯಾರ್ಥಿ ಅಥವಾ ಪೋಷಕರ ಬ್ಯಾಂಕ್ ಖಾತೆಯ ವಿವರಗಳು.
  • ಆದಾಯ ಪ್ರಮಾಣ ಪತ್ರ (ಫಾರ್ಮ್ 16A/ಆದಾಯ ಪ್ರಮಾಣಪತ್ರ/ ಪೇಸ್ಲಿಪ್).
  • ವಿದ್ಯಾರ್ಥಿಗಳ ಇತ್ತೀಚಿನ ಫೋಟೋ ಸಲ್ಲಿಸಬೇಕು
ಅರ್ಜಿ ಸಲ್ಲಿಸುವ ವಿಧಾನ
  • ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ www.buddy4study.com ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಎಸ್‌ಬಿಐ ಆಶಾ ವಿದ್ಯಾರ್ಥಿವೇತನ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.
  • ನಂತರ ಮತ್ತೊಂದು ಪುಟ ತೆರೆಯುತ್ತದೆ.
  • ಆ ಪುಟದಲ್ಲಿ ನಿಮ್ಮ ಹೆಸರು, ಮೊಬೈಲ್ ನಂಬರ್, ಇ-ಮೇಲ್ ಐಡಿ ಇತ್ಯಾದಿ ವಿವರಗಳನ್ನು ಸಲ್ಲಿಸಿ ರಿಜಿಸ್ಟರ್‌ ಮಾಡಿಕೊಳ್ಳಿ.
  • ನಂತರ ಎಸ್‌ಬಿಐ ಆಶಾ ವಿದ್ಯಾರ್ಥಿವೇತನ 2022 ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.
  • ಆನ್‌ಲೈನ್‌ ನಮೂನೆಯಲ್ಲಿ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.
  • ನಂತರ ಸಂಬಂಧಿಸಿದ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ನೀವು ಸಲ್ಲಿಸಿರುವ ಎಲ್ಲಾ ವಿವರಗಳು ಸರಿಯಾಗಿ ಇವೆಯೇ ಎಂದು ಒಮ್ಮೆ ಪರಿಶೀಲನೆ ಮಾಡಿಕೊಳ್ಳಿ.
  • ಪರಿಶೀಲನೆ ಮಾಡಿಕೊಂಡ ನಂತರ ಸಬ್ಮಿಟ್‌ ಬಟನ್‌ ಕ್ಲಿಕ್‌ ಮಾಡಿ.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments